ಆಲೆಟ್ಟಿ ಕಸ್ತೂರಿ ಬಾ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು
ಮಾ. 15 ರಂದು ಆಚರಿಸಲಾಯಿತು.
ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ವಸಂತ ಆಲೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಹಿಳಾಮಂಡಲದ ಅಧ್ಯಕ್ಷೆ ಶ್ರೀಮತಿ ಜಲಜಾಕ್ಷಿ ಮಹಾಬಲ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ನಿರ್ದೇಶಕಿ ಶ್ರೀಮತಿ ಯಶೋಧ ಕುಡೆಕಲ್ಲು, ಆಲೆಟ್ಟಿ ಸೊಸೈಟಿ ನಿರ್ದೇಶಕಿ ಶ್ರೀಮತಿ ವಿದ್ಯಾ ಕುಡೆಕಲ್ಲು,
ಅರೆಭಾಷೆ ಸಾಹಿತ್ಯ ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಂಗನವಾಡಿ ಹಿರಿಯ ಶಿಕ್ಷಕಿ ಹೊನ್ನಮ್ಮ ಬಾಲಕೃಷ್ಣ ಆಡಿಂಜ ರವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಶ್ರೀಮತಿ ಸರೋಜಿನಿ ಕುಡೆಕಲ್ಲು ಪ್ರಾರ್ಥಿಸಿದರು. ಶ್ರೀಮತಿ ಗೀತಾ ಸುಧಾಮ ಆಲೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಶ್ರೀಮತಿ ಸರೋಜಿನಿ ಬಾರ್ಪಡೆ ಸ್ವಾಗತಿಸಿದರು. ಶ್ರೀಮತಿ ಉಷಾ ಸುಂದರ ಆಲೆಟ್ಟಿ ವಂದಿಸಿದರು. ಶ್ರೀಮತಿ ಜಾನಕಿ ಮೈಂದೂರು ಕಾರ್ಯಕ್ರಮ ನಿರೂಪಿಸಿದರು. ಮಹಿಳಾಮಂಡಲದ ಪೂರ್ವಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು. ಆಗಮಿಸಿದ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು