ಪರೀಕ್ಷಾ ಸಿದ್ಧತೆಯೊಂದಿಗೆ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳು

ಇಂದಿನಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಆರಂಭ ಗೊಂಡಿದ್ದು ವಿದ್ಯಾರ್ಥಿಗಳು ಸಕಲ ಸಿದ್ಧತೆಯೊಂದಿಗೆ ಸುಳ್ಯದ ಪರೀಕ್ಷಾ ಕೇಂದ್ರ ಗಳಿಗೆ ಆಗಮಿಸಿದ್ದಾರೆ.
ಸುಳ್ಯ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿ 1992 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್, ಸಿಸಿಟಿವಿ,ವಿದ್ಯಾರ್ಥಿಗಳ ಸುರಕ್ಷತೆಗೆ ಗಮನ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ, ಕುಡಿಯುವ ನೀರು, ಅರೋಗ್ಯ ತಪಾಷಣಾ ಸಿಬ್ಬಂದಿಗಳು
ಮುಂತಾದ ಮುನ್ನೆಚ್ಚರಿಕಾ ಕ್ರಮ ಕೈ ಗೊಂಡಿರುವ ಬಗ್ಗೆ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಸುದ್ದಿಗೆ ಮಾಹಿತಿ ನೀಡಿದ್ದಾರೆ.
ಸುಳ್ಯದ ಕೆಪಿಎಸ್ ಗಾಂಧಿನಗರ, ಸುಳ್ಯ ಜೂನಿಯರ್ ಕಾಲೇಜು, ಸೈಂಟ್ ಜೋಸೆಫ್ ಶಾಲೆಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ.