ಕೆವಿಜಿ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

0

ದಿನಾಂಕ 20 ಮಾರ್ಚ್ 2025 ರಂದು ಕೆವಿಜಿ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ ಕಾಲೇಜಿನ
ಕಾನೂನು ನೆರವು ಕೋಶದ ಸಂಯೋಜಕತ್ವ ದಲ್ಲಿ, “ಭಾರತೀಯ ಉತ್ತರಾಧಿಕಾರ ಕಾಯ್ದೆ- 1925 ” ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾoಶುಪಾಲರಾದ ಡಾ. ಉದಯಕೃಷ್ಣ ಬಿ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ಸುಳ್ಯದ ನ್ಯಾಯವಾದಿ ಶ್ರೀ ಜಗದೀಶ್ ಹುದೇರಿ , ” ಭಾರತೀಯ ಉತ್ತರಾಧಿಕಾರ ಕಾಯ್ದೆ- 1925″ ಪ್ರಕಾರ ಪಿತ್ರಾರ್ಜಿತ ಆಸ್ತಿ ಮತ್ತು ಸ್ವಯಾರ್ಜಿತ ಆಸ್ತಿಯನ್ನು ಪಡೆದುಕೊಳ್ಳುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ಗೌರವ ಅತಿಥಿ ಗಳಾದ ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾoಶುಪಾಲ, ಕಾನೂನು ಕಾಲೇಜಿನ ಆಡಳಿತಾಧಿಕಾರಿ ಪ್ರೊ. ದಾಮೋದರ ಗೌಡ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆಯ ಸಂಯೋಜನಾಧಿಕಾರಿ ಉಪನ್ಯಾಸಕಿ ಶ್ರೀಮತಿ ರಚನಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಉಪನ್ಯಾಸಕಿ, ಕಾನೂನು ನೆರವು ಕೋಶದ ಸಂಯೋಜಕಿ ಶ್ರೀಮತಿ. ಕಲಾವತಿ ಸ್ವಾಗತಿಸಿ, ವಂದಿಸಿದರು. ಕಾಲೇಜಿನ ಭೋದಕ, ಭೋದಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.