ಸುಬ್ರಹ್ಮಣ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

0



ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಾತ್ರವಲ್ಲದೆ ,ಅತ್ಯುನ್ನತ ಹುದ್ದೆ ಅಲಂಕರಿಸಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ತಾಲೂಕು ,ಜಿಲ್ಲೆ, ರಾಜ್ಯ, ಹಾಗೂ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ, ಉದ್ದಿಮೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ,ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಾರಥಿಯಾಗಿ ಮುನ್ನಡೆಯುತ್ತಿದ್ದಾರೆ .ಇಡೀ ನಾರಿ ಶಕ್ತಿ ನಮ್ಮ ದೇಶದ ಆಸ್ತಿ ಆಗಿರುತ್ತದೆ. ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ನುಡಿದರು.


ಅವರು ಶುಕ್ರವಾರ ಸುಬ್ರಹ್ಮಣ್ಯದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದೇವಳದ ಎದುರುಗಡೆಯಿಂದ ಆರಂಭಿಸಲಾದ ನಾರಿ ಶಕ್ತಿ ಜಾಥ ವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ದೇವಳದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಲೋಲಾಕ್ಷ ಕೈಕಂಬ ,ರೋಟರಿ ವಲಯ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೇ ಸುಜಾತ ಕಲ್ಲಾಜೆ? ಕರ್ನಾಟಕ ರಾಜ್ಯ ಮಹಿಳಾ ತರಬೇತುದಾರರ ಸಂಚಲನ ಸಮಿತಿ ಅಧ್ಯಕ್ಷೇ ಆಶಲತಾ ಸುವರ್ಣ ,ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷ ಮಧುಮತಿ ಬೊಳ್ಳೂರು ,ಸುಬ್ರಮಣ್ಯ ವಾಣಿ ವಣಿತ ಸಮಾಜದ ಅಧ್ಯಕ್ಷೇ ಪುಷ್ಪ ಕೆ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೇ ಗುಣವತಿ ಸುಬ್ರಹ್ಮಣ್ಯ ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೇಪ್ರೇಮ ರಘು, ನವೋದಯ ಸಹಾಯ ಸಂಘಗಳ ಅಧ್ಯಕ್ಷೇ ಸವಿತಾ, ಗ್ರಾಮ ಅಭಿವೃದ್ಧಿ ಯೋಜನೆ ಅಧ್ಯಕ್ಷೆ ಪವಿತ್ರ ದಿನೇಶ್, ಸುಬ್ರಹ್ಮಣ್ಯ ವಾಣಿ ವನಿತಾ ಸಮಾಜದ ಮಾಜಿ ಅಧ್ಯಕ್ಷೇ ಶೋಭಾ ನಲ್ಲೂರಾಯ ,ತ್ರಿವೇಣಿ ಧಾಮ್ಲೆ, ರತ್ನವತಿ ನುಚಿಲ ,ಹೇಮವತಿ ನುಚಿಲ, ಸುಜಾತ ಗಣೇಶ್ ಮತ್ತಿತರರು ಹಾಜರಿದ್ದರು.

ನಂತರ ನಾರಿ ಶಕ್ತಿ ಜಾತವು ಮುಖ್ಯ ರಸ್ತೆಯಲ್ಲಿ ಘೋಷಣೆಗಳೊಂದಿಗೆ ಸುಬ್ರಮಣ್ಯ ಗ್ರಾಮ ಪಂಚಾಯಿತಿ ಸಭಾಭವದವರಿಗೆ ಸಾಗಿದರು. ಸಭಾ ಕಾರ್ಯ ಕ್ರಮದಲ್ಲಿ ಮಹಿಳಾ ಆಟೋ ಚಾಲಕಿ ಲೀಲಾವತಿ ಹಾಗೂ ಹೈನುಗಾರಿಕೆಯಲ್ಲಿ ಯಶಸ್ಸನ್ನು ಕಂಡ ಲಲಿತ ಅವರುಗಳನ್ನ ಸನ್ಮಾ ನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು . ಮಲ್ಲಿಕಾ ಜ್ಯೋತಿ ಗುಡ್ಡೆ ಅವರಿಂದ ಏಕವ್ಯಕ್ತಿ ನಾಟಕ ಪ್ರದರ್ಶನಗೊಂಡಿತು.