ಐವರ್ನಾಡು ಗ್ರಾಮ ಪಂಚಾಯತ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಐವರ್ನಾಡು ಘನತ್ಯಾಜ್ಯ ಘಟಕದ ಬಳಿ ನಿರ್ಮಾಣವಾದ ಸಂಜೀವಿನಿ ಕಟ್ಟಡದ ಹಸ್ತಾಂತರ ಕಾರ್ಯಕ್ರಮ ಮಾ.21 ರಂದು ನಡೆಯಿತು.


ಈ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ತಾಲೂಕು ಪಂಚಾಯತ್, ಅಭಿವೃದ್ಧಿ ಅಧಿಕಾರಿಗಳು, ಸಂಜೀವಿನಿ ಸಂಘದ MBK, LCRP, ಸಖಿ ಗಳು, ಸದಸ್ಯರು ಹಾಗೂ ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು ಭಾಗವಹಿಸಿದ್ದರು.