ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಹಿಳಾ ವೇದಿಕೆಯ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮಾ. 22ರಂದು ಮರಾಟಿ ಸಮಾಜ ಸೇವಾ ಸಂಘದ ಸಭಾಂಗಣ ಗಿರಿದರ್ಶಿನಿಯಲ್ಲಿ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರೇವತಿ ದೊಡ್ಡೇರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಮಾಳಪ್ಪಮಕ್ಕಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ ಹೊನ್ನೇಡಿ, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ, ಕೋಶಾಧಿಕಾರಿ ಐತ್ತಪ್ಪ ಎನ್, ಉಪಾಧ್ಯಕ್ಷೆ ಶ್ರೀಮತಿ ಸುಲೋಚನ ನಾರಾಯಣ, ಮಹಿಳಾ ವೇದಿಕೆಯ ಗೌರವಾಧ್ಯಕ್ಷೆ ಶ್ರೀಮತಿ ಗಿರಿಜಾ ಎಂ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ನಾಟಿವೈದ್ಯೆ ಶ್ರೀಮತಿ ಮಾನಕ್ಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಮಾನಕ್ಕರ ಪುತ್ರ ಕೇಶವ ನಾಯ್ಕ್ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಶೋಭಾ ಬೆಳ್ಳಾರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಮತಿ ಪದ್ಮಿನಿ ಲೋಕೇಶ್ ಸನ್ಮಾನಪತ್ರ ವಾಚಿಸಿದರು.
ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಮೀನಾಕ್ಷಿ ದೊಡ್ಡೇರಿ ಸ್ವಾಗತಿಸಿ, ಶ್ರೀಮತಿ ನಳಿನಾಕ್ಷಿ ವಂದಿಸಿದರು. ಶ್ರೀಮತಿ ಪದ್ಮಿನಿ ಲೋಕೇಶ್ ದೊಡ್ಡೇರಿ ಮತ್ತು ಶ್ರೀಮತಿ ಪುಷ್ಪಲತಾ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಅದೃಷ್ಟ ಮಹಿಳೆ ಆಯ್ಕೆ ಮಾಡಲಾಯಿತು. ಶ್ರೀಮತಿ ಮೀನಾಕ್ಷಿ ಭಸ್ಮಡ್ಕ ಅದೃಷ್ಟ ಮಹಿಳೆಯಾಗಿ ಆಯ್ಕೆಯಾದರು. ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.