ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿಯಲ್ಲಿ ತ್ರಿವೇಣಿ ಚಾರಿಟೇಬಲ್ ಟ್ರಸ್ಟ್ ಪೆರುವಾಜೆ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಆಶ್ರಯದಲ್ಲಿ ಬ್ರಹತ್ ಆಧಾರ್ ಮೇಳದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ನೆರವೇರಿಸಿದರು.
ಅಧ್ಯಕ್ಷತೆಯನ್ನು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಚಿನ್ ರಾಜ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ, ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ವೆಂಕಪ್ಪ ಗೌಡ ನಾರ್ಕೋಡು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಇಬ್ರಾಹಿಂ ಅಂಬಟೆ ಗದ್ದೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು. ಸ್ಟಾರ್ ಸಂಜೀವಿನಿ ಸಂಘದ ಪದಾಧಿಕಾರಿಗಳು ಸಹಕಾರ ನೀಡಿದ್ದರು.