ಕೆವಿಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕ ಇದರ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಮಾರ್ಚ್ 22 ರಂದು ಕೆವಿಜಿ ಮೆಡಿಕಲ್ ಕಾಲೇಜಿನ ರಕ್ತದಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾದ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕರಾಗಿರುವ ಡಾ ಸಿ ಆರ್ ಭಟ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ರಕ್ತ ಕೇಂದ್ರದ ಮುಖ್ಯಸ್ಥೆ ಡಾ. ನವ್ಯ, ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾoಶುಪಾಲ,ಕೆವಿಜಿ ಕಾನೂನು ಕಾಲೇಜಿನ ಆಡಳಿತಾ ಧಿಕಾರಿ ಪ್ರೊಫೆಸರ್ ಕೆ ವಿ ದಾಮೋದರ ಗೌಡ, ರಕ್ತಕೇಂದ್ರದ ಸಿಬ್ಬಂದಿ ವರ್ಗ, ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕಿ, ಉಪನ್ಯಾಸಕಿ ಶ್ರೀಮತಿ ನಯನ ಪಿ ಯು, ರೆಡ್ ಕ್ರಾಸ್ ಘಟಕದ ಸಂಯೋಜಕಿ ಉಪನ್ಯಾಸಕಿ ಶ್ರೀಮತಿ ಅರ್ಚನಾ ಆರ್ ರೈ,ಉಪನ್ಯಾಸಕರುಗಳು,ರಕ್ತದಾನಿ ವಿದ್ಯಾರ್ಥಿಗಳು ಹಾಜರಿದ್ದರು. ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷಾ ಕೆ ವಿ ಕಾರ್ಯಕ್ರಮ ನಿರೂಪಿಸಿದರು.