Home Uncategorized ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ವತಿಯಿಂದ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ವತಿಯಿಂದ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ

0

ಮಾದಕ ವಸ್ತುಗಳ ವಿರುದ್ಧ ಹೋರಾಡುವಂತೆ ವಿದ್ಯಾರ್ಥಿಗಳಿಗೆ ಕರೆ : ಉಪನಿರೀಕ್ಷಕ ಸಂತೋಷ್

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾ. ೨೨ರಂದು ನಡೆಯಿತು. ಸುಳ್ಯ ಪೋಲೀಸ್ ಉಪನಿರೀಕ್ಷಕ ಸಂತೋಷ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾ. ಜ್ಯೋತಿ ಆರ್. ಪ್ರಸಾದ್, ಸೆಕ್ರೆಟರಿ ಕಮಿಟಿ ಬಿ ಎ.ಒ.ಎಲ್.ಇ (ರಿ), ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಅಕಾಡೆಮಿಕ್ ಡೀನ್ ಡಾ. ಪ್ರಜ್ಞಾ ಎಂ.ಆರ್. ಅತಿಥಿಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸುಳ್ಯದ ಉಪನಿರೀಕ್ಷಕ ಸಂತೋಷ್‌ರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಅವರು ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ನೀಡಿ ನಿಷೇಧಿತ ಮಾದಕ ವಸ್ತುಗಳ ಪರಿಣಾಮಗಳು ಕಾನೂನು ನಿಯಮಗಳು ಹಾಗೂ ವಿದ್ಯಾರ್ಥಿಗಳಿಗೆ ಇದು ಹೇಗೆ ಹಾನಿಕಾರಕ ಎಂಬುದರ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಡಾ. ಜ್ಯೋತಿ ಆರ್. ಪ್ರಸಾದ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಲ್ಲರಿಗೂ ಸರಿಯಾಗಿ ಜಾಗೃತಿ ನೀಡುವುದರ ಅಗತ್ಯತೆಯನ್ನು ವಿವರಿಸಿದರು. ಡಾ. ಉಜ್ವಲ್ ಯು.ಜೆ. ಮಾತನಾಡಿ ವಿದ್ಯಾರ್ಥಿಗಳು ಸದ್ಗುಣಗಳನ್ನು ಅಭ್ಯಾಸ ಮಾಡುವ ಮೂಲಕ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಸಂದೇಶ ನೀಡಿದರು. ಇದೇ ವೇಳೆ ಪ್ರಾಂಶುಪಾಲರಾದ ಡಾ. ಸುರೇಶ ವಿ ಮಾದಕ ವಸ್ತುಗಳ ವಿರುದ್ಧ ಹೋರಾಡುವ ಮಹತ್ವವನ್ನು ವಿವರಿಸಿದರು. ಈ ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್. ಮತ್ತು ಯೂತ್ ರೆಡ್ ಕ್ರಾಸ್ ವತಿಯಿಂದ ಹಮ್ಮಿಕೊಳ್ಳಲಾಯಿತು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ಸತ್ಯಜಿತ್ ಎಂ, ವಂದಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಎನ್.ಎಸ್.ಎಸ್. ಸಂಯೋಜಕರುಗಳಾದ ಪ್ರೊ. ನಸೀಮಾ, ಪ್ರೊ. ಅಶ್ವಿತಾ, ಪ್ರೊ. ಲಕ್ಷ್ಮಿನಾರಾಯಣ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಮನಸ್ವಿ ಕೆ. ಮತ್ತು ಖುಷಿ ಕೆ.ಟಿ. ಕಾರ್ಯಕ್ರಮ ನಿರೂಪಿಸಿದರು. ಸುಮಾರು ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

NO COMMENTS

error: Content is protected !!
Breaking