Home Uncategorized ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

0

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಸಾಂಸ್ಕೃತಿಕ ಮತ್ತು ವೈಯಕ್ತಿಕ ಸ್ಪರ್ಧೆಗಳು ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ ಮಾ.‌ 23ರಂದು ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಧುಮತಿ ಬೊಳ್ಳೂರುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮ ಸುಳ್ಯ ಸಿ.ಡಿ.ಪಿ.ಒ. ಶ್ರೀಮತಿ ಶೈಲಜಾ ಉದ್ಘಾಟಿಸಿದರು. ಸುಳ್ಯ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಕಿಶೋರಿ ಶೇಟ್, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷೆ ಶ್ರೀಮತಿ ಉಷಾ ಬಿ. ಭಟ್, ಸುಳ್ಯ ಎಂ.ಬಿ. ಫೌಂಡೇಷನ್‌ ನ ಸಂಚಾಲಕಿ ಶ್ರೀಮತಿ ಹರಿಣಿ ಸದಾಶಿವ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಶ್ರೀಮತಿ ತ್ರಿವೇಣಿ ದಾಮ್ಲೆ, ಮಾಜಿ ಅಧ್ಯಕ್ಷೆ ಶ್ರೀಮತಿ ಪ್ರಫುಲ್ಲಾ ರೈ, ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಪಡ್ಡಂಬೈಲು, ಮಾಜಿ ತಾ.ಪಂ. ಸದಸ್ಯೆ ಶ್ರೀಮತಿ ಸುವರ್ಣಿನಿ ಎನ್.ಎಸ್, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಅನಿತಾ ಸುತ್ತುಕೋಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅಂತರಾಷ್ಟ್ರೀಯ ವನಿತಾ ಪ್ರಶಸ್ತಿ ಪುರಸ್ಕೃತೆ ಅಕ್ಷತಾ ನಾಗನಕಜೆ, ನಾಟಿವೈದ್ಯೆ ಪುಷ್ಪಾವತಿ ಬುಡ್ಲೆಗುತ್ತು, ಸ್ವದ್ಯೋಗ ಶ್ವೇತಾ ವೇಣುಗೋಪಾಲ್, ನಾಟಿವೈದ್ಯೆ ದೇವಕಿ ತೊಡಿಕಾನ, ಸಾಹಿತಿ ಲೀಲಾದಾಮೋದರ್, ವಿಧುಷಿ ಮಂಜುಶ್ರೀ ರಾಘವ್, ಹೊಲಿಗೆ ಶಿಕ್ಷಕಿ ತಾರಾ ರೈ, ಶ್ರೀಮತಿ ಪುಷ್ಪಾವತಿ ಹೋಮ್ ಗಾರ್ಡ್, ಸುಗಮ ಡ್ರೈವಿಂಗ್ ಸ್ಕೂಲ್ ನ ಜಯಲಕ್ಷ್ಮಿ ಅರಂಬೂರು, ನಾಟಿವೈದ್ಯೆ ಶ್ರೀಮತಿ ಮೋಹಿನಿಯವರನ್ನು ಮಹಿಳಾ ಸಾಧಕರ ನೆಲೆಯಲ್ಲಿ ಸನ್ಮಾನಿಸಲಾಯಿತು.


ಶ್ರೀಮತಿ ಮಧುಮತಿ ಬೊಳ್ಳೂರು, ಶ್ರೀಮತಿ ಅನಿತಾ ಸುತ್ತುಕೋಟೆ, ಶ್ರೀಮತಿ ಲಲಿತಾ ಬೆಟ್ಟಂಪಾಡಿ, ಶ್ರೀಮತಿ ಚಂದ್ರಕಲಾ ಕುತ್ತಮೊಟ್ಟೆ, ಶ್ರೀಮತಿ ಪುಷ್ಪಾ ರಾಧಾಕೃಷ್ಣ, ಶ್ರೀಮತಿ ಶಾರದಾ ಶೇಟ್, ಶ್ರೀಮತಿ ಶಿಲ್ಪಾ ಆಚಾರ್ಯ, ಶ್ರೀಮತಿ ಯಶೋಧ, ಶ್ರೀಮತಿ ಅಮಿತಾ ರೈ ಶ್ರೀಮತಿ ಸವಿತಾ ಸನ್ಮಾನಪತ್ರ ವಾಚಿಸಿದರು. ಶ್ರೀಮತಿ ಸವಿತಾ ಸಂದೀಪ್ ಪ್ರಾರ್ಥಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಒಕ್ಕೂಟದ ಕೋಶಾಧಿಕಾರಿ ಶ್ರೀಮತಿ ಚಂದ್ರಾಕ್ಷಿ ಜೆ. ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ. ಪ್ರಸಾದ್ ಕಾನತ್ತೂರ್ ಸ್ವಾಗತಿಸಿದರು. ಸುಳ್ಯ ಮಹಿಳಾ ಸಮಾಜದ ಖಜಾಂಚಿ ಶ್ರೀಮತಿ ರಾಧಾಮಣಿ ಬಿ.ಜಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ.

NO COMMENTS

error: Content is protected !!
Breaking