ಬೆಳ್ಳಾರೆ ಸ್ನೇಹಶ್ರೀ ಮಹಿಳಾ ಮಂಡಲ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಾ. 23ರಂದು ನಡೆಯಿತು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಹಿಳಾ ರಕ್ಷಣೆ, ಸೈಬರ್ ಅಪರಾಧಗಳು ಎಂಬ ವಿಷಯದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಪೂಜಾ ಎಸ್ ನಾಯಕ
ಸದೃಢ ಭಾರತ ಕಟ್ಟುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದರು
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಅಧ್ಯಕ್ಷೆ ಪೂರ್ಣಿಮಾ ಪಡ್ಪು ಅಧ್ಯಕ್ಷತೆ ವಹಿಸಿದ್ದರು, ಶ್ರೀ ರಕ್ತೇಶ್ವರಿ ಮಹಿಳಾ ಮಂಡಳಿ ಕೊಳಂಬಳ ಬೆಳ್ಳಾರೆ ಇದರ ಅಧ್ಯಕ್ಷೆ ಸುಲೋಚನಾ ವಿಶ್ವನಾಥ ಕೆ ಕಾರ್ಯಕ್ರಮ ಉದ್ಘಾಟಿಸಿದರು. ಪೆರುವಾಜೆ ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷೆ ಅನಸೂಯ ಬಿ.ಎ, ನೆಟ್ಟಾರು ಅಕ್ಷತಾ ಮಹಿಳಾ ಮಂಡಲ ಅಧ್ಯಕ್ಷೆ ಚಂಚಲಾಕ್ಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ನೇಹಶ್ರೀ ಮಹಿಳಾ ಮಂಡಲದ ಕೋಶಾಧಿಕಾರಿ ಶ್ರೀಮತಿ ಕುಸುಮಾ ಕುರುoಬುಡೇಳು ಸ್ವಾಗತಿಸಿ, ಸ್ನೇಹಶ್ರೀ ಮಹಿಳಾ ಮಂಡಲ ಉಪಾಧ್ಯಕ್ಷೆ ಪೂರ್ಣಿಮಾ ನೆಟ್ಟಾರು ವಂದಿಸಿದರು. ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯೆ ಭಾರತಿ ಕೆ ಕಾರ್ಯಕ್ರಮ ನಿರೂಪಿಸಿದರು.
