ಹಸೆಮಣೆಗೇರಿದ 10 ಜೋಡಿಗಳು

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ ೨೪ ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ೧೦ ಜೋಡಿಗಳು ಇಂದು ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಯಿತು. ಅರ್ಚಕರುಗಳು ಶಾಸ್ತ್ರೋಕ್ತವಾಗಿ ವೈದಿಕ ಕಾರ್ಯಕ್ರಮ ನಡೆಸಿ ಹತ್ತು ಜೋಡಿಗಳು ಪರಸ್ಪರ ಹಾರ ಬದಲಾಯಿಸಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕ ಪಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬಲಡ್ಕ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಚುತ ಆಲ್ಕಬೆ, ದೇವಾಲಯದ ಅಧಿಕಾರಿಗಳು, ಕಂದಾಯ ಇಲಾಖಾ ಅಧಿಕಾರಿಗಳು ಇದ್ದರು.
ಪೋಟೋ: ಶಾಂತಲಾ ಸ್ಟುಡಿಯೋ ಸುಬ್ರಹ್ಮಣ್ಯ



