ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಲರ್ಜಿ ಸ್ಕಿನ್ ಪ್ರಿಕ್ ಟೆಸ್ಟ್ ಸೇವೆ ಆರಂಭ

0

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಲರ್ಜಿ ಪ್ರಿಕ್ ಟೆಸ್ಟ್ ಸೇವಾ ಕೇಂದ್ರವನ್ನು ಪ್ರಾರಂಭಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಮಾ. 24ರಂದು ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷಡಾ. ಕೆ.ವಿ ಚಿದಾನಂದ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ.ಆರ್ ಭಟ್, ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರು ಡಾ. ಪ್ರಕಾಶ್ ರಾವ್, ಇ. ಎನ್. ಟಿ ವಿಭಾಗ ಮುಖ್ಯಸ್ಥರಾದ ಡಾ. ರವಿಶಂಕರ್, ರೆಸ್ಪಿರೇಟರಿ ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ. ಪ್ರೀತಿರಾಜ್ ಬಲ್ಲಾಳ್, ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನಿರುದ್ಧ, ಸರ್ಜರಿ ವಿಭಾಗದ ಡಾ. ರಂಜಿತ್ ಕೆ.ಬಿ, ಕಮ್ಯೂನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥರಾದ ಡಾ. ದಿನೇಶ್ ಪಿ.ವಿ, ಡಾ. ಅಪೂರ್ವ ದೊರೆ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾದ್ಯಾಪಕರು ಉಪಸ್ಥಿತರಿದ್ದರು.