ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾ.25 ರಂದು ಶಾಲಾ ಸ್ಕೌಟ್ ಗೈಡ್ ಕಬ್ ಬುಲ್ ಬುಲ್ ದಳಗಳ ಈ ಶೈಕ್ಷಣಿಕ ವರ್ಷದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ರೆ. ಫಾ. ವಿಕ್ಟರ್ ಡಿಸೋಜ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ ಗೈಡ್ ಸುಳ್ಯ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಲಾ ಪ್ರಾಥಮಿಕ ವಿಭಾಗದ ಪೋಷಕ ಸಮಿತಿಯ ಉಪಾಧ್ಯಕ್ಷರಾದ ಶಶಿಧರ್ ಎಂ ಜೆ ರವರು ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಮೇರಿ ಸ್ಟೆಲ್ಲಾ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ತದನಂತರ ವಾರ್ಷಿಕ ವರದಿಯನ್ನು ಶಿಕ್ಷಕ ಪ್ರತಿನಿಧಿ ಶ್ರೀಮತಿ ಮಮತಾ ರವರು ವಾಚಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಶಶಿಧರ್ ರವರು ಮಾತನಾಡಿ ಮಕ್ಕಳಿಗೆ ಮುಂದಿನ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಡಿಸಲಾಯಿತು.
ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರಿಗೆ ಹೂವಿನಗಿಡ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಸಂಚಾಲಕರಾದ ಫಾ. ವಿಕ್ಟರ್ ಡಿಸೋಜರವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಭಾನುಪ್ರಕಾಶ್ ರವರು ಸ್ವಾಗತಿಸಿ ಶ್ರೀಮತಿ ಪುಷ್ಪವೇಣಿರವರು ವಂದನಾರ್ಪಣೆ ಗೈದರು. ಕಾರ್ಯಕ್ರಮವನ್ನು ಶ್ರೀಮತಿ ಚೈತ್ರರವರು ನಿರೂಪಿಸಿದರು. ಲಘು ಉಪಹಾರದ ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಶಿಕ್ಷಕರು ಸಹಕರಿಸಿದರು.