ಆನಂದ ಕುಕ್ಕುಜಡ್ಕ ನಿಧನ

0

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಪ.ಜಾತಿ ಕಾಲನಿ ನಿವಾಸಿ ಆನಂದ ಎಂಬವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಮಾ. 23 ರಂದು ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.


ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.


ಮೃತರು ತಾಯಿ ಶ್ರೀಮತಿ ಲಕ್ಷ್ಮೀ, ಪತ್ನಿ ಶ್ರೀಮತಿ ಯಮುನಾ, ಓರ್ವ ಪುತ್ರ ರಿತೇಶ್, ಓರ್ವ ಪುತ್ರಿ ಕು.ಚೈತ್ರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ‌ಮೃತರು ಕುಕ್ಕುಜಡ್ಕದ ಯಶಸ್ವಿ ಮಿತ್ರ ಸಂಘದ ಸದಸ್ಯರಾಗಿ ಸಕ್ರಿಯರಾಗಿದ್ದರು.