ಸಂಬಂಧಪಟ್ಟ ಇಲಾಖಾಧಿಕಾರಿಗಳು ಇತ್ತ ಗಮನ ಹರಿಸಬೇಕೆಂದು ಸಾರ್ವಜನಿಕರ ಆಗ್ರಹ
ಕಲ್ಲುಗುಂಡಿ ಪೇಟೆಯ ಮುಖ್ಯರಸ್ತೆಯ ಕೆಲವು ಕಡೆಗಳಲ್ಲಿ ಚರಂಡಿಯ ಸ್ಲಾಬ್ ಗಳು ಮುರಿದು ಬಿದ್ದಿದ್ದು ವಿದ್ಯಾರ್ಥಿಗಳು, ಹಾಗೂ ಸಾರ್ವಜನಿಕರು ನಡೆದಾಡಲು ಸಂಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಘಟನೆ ಕಳೆದ ಅನೇಕ ತಿಂಗಳುಗಳಿಂದ ಕಂಡುಬರುತ್ತಿದ್ದರೂ ಕೂಡ ಸಂಬಂಧಪಟ್ಟವರು ಇತ್ತ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರ ಅಹವಾಲಾಗಿದೆ. ಅಲ್ಲದೆ ಮುಂದಿನ ಎರಡು ದಿನಗಳಲ್ಲಿ ಕಲ್ಲುಗುಂಡಿ ಪ್ರದೇಶದಲ್ಲಿ ಒತ್ತೆಕೋಲ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರ ನಡೆದಾಟ ಈ ರಸ್ತೆಯಲ್ಲಿ ಹೆಚ್ಚಾಗಿ ಇರುತ್ತದೆ.
ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಇತ್ತ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.