Home Uncategorized ಕೆ ಎಸ್ ಎಸ್ ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಕೆ ಎಸ್ ಎಸ್ ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಮಾ.25 ರಂದು ಹಮ್ಮಿಕೊಂಡಿತ್ತು. ಕಾಲೇಜಿನ ಪ್ರಾಂಶುಪಾಲ ಡಾl ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ಪದವಿಯ ಸಹ ಪ್ರಾಧ್ಯಾಪಕರಾದ ಡಾ. ಅಕ್ಷತಾ ಕಾರಂತ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡಿದರು.


ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ ಹಾಗೂ ವಲಯದ ಸಹ ಸಂಯೋಜನಾಧಿಕಾರಿಯಾದ ಪ್ರೊ. ರಾಮಕೃಷ್ಣ ಕೆ ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಜ್ಯ ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಯನ್ನು ಪಡೆದ ಶ್ರೀಮತಿ ಚಿತ್ರಲೇಖ ಕೆ ಎಸ್ ಅವರನ್ನು ಸನ್ಮಾನಿಸಲಾಯಿತು.

ಪದವಿ ಕಾಲೇಜುಗಳಾದ ನೆಲ್ಯಾಡಿ, ಬೆಳ್ಳಾರೆ, ಸುಳ್ಯ, ನೆಹರು ಮೆಮೋರಿಯಲ್ ಕಾಲೇಜ್, ವಿದ್ಯಾರಶ್ಮಿ ಕಾಲೇಜ್ ಸವಣೂರು ಅಲ್ಲಿಯ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳು ಮತ್ತು ಎನ್. ಎಸ್. ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಡಬ -ಸುಳ್ಯ
ವಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಆರತಿ ಕೆ ಸ್ವಾಗತಿಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಸುಮಿತ್ರ ವಂದಿಸಿದರು. ಸಂಖ್ಯಾ ಮತ್ತು ಅಂಕಿತ ನಿರೂಪಿಸಿದರು.

NO COMMENTS

error: Content is protected !!
Breaking