Home ಪ್ರಚಲಿತ ಸುದ್ದಿ ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಚೇತನರ ಗ್ರಾಮ ಸಭೆ

ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಚೇತನರ ಗ್ರಾಮ ಸಭೆ

0

ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಾ.25 ರಂದು ವಿಶೇಷ ಚೇತನರ ಗ್ರಾಮ ಸಭೆ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಸಭಾಧ್ಯಕ್ಷತೆ ವಹಿಸಿದ್ದರು.ಗ್ರಾಮ ಪಂಚಾಯತ್  ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಸದಸ್ಯರಾದ  ಚಂದ್ರಶೇಖರ ದೇರಾಜೆ,  ಲಿಖಿತ್ ಪಲ್ಲೋಡಿ,  ಲಕ್ಷ್ಮಣ ಗೌಡ ಬೊಳ್ಳಾಜೆ, ಶ್ರೀಮತಿ ಪೂರ್ಣಿಮಾ ದೇರಾಜೆ, ಶ್ರೀಮತಿ ನೇತ್ರಾವತಿ ಕಲ್ಲಾಜೆ, ಶ್ರೀಮತಿ ಪ್ರಮೀಳ ಸಂಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಜಯಂತ್ ಯು.ಬಿ., ಕಾರ್ಯದರ್ಶಿ  ಸೀತಾರಾಮ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಶ್ರೀಮತಿ ಮೀನಾಕ್ಷಿ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಶ್ರೀಮತಿ ಮೀನಾಕ್ಷಿ  ಸ್ವಾಗತಿಸಿ , ನಿರೂಪಿಸಿ ,ವಂದಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಶೇ.5  ಅನುದಾನದಡಿ ನೀರಿನ ಟ್ಯಾಂಕ್, ವಾಟರ್ ಬೆಡ್, ವೀಲ್ ಚಯರ್, ವಿದ್ಯಾಭ್ಯಾಸಕ್ಕೆ ಸಹಾಯಧನ ಹಾಗೂ 9 ಮನೆಗಳಿಗೆ ಸೋಲಾರ್ ದೀಪಗಳನ್ನು ಮತ್ತು ಅರ್ಹ ಪ.ಜಾತಿ, ಪ.ಪಂಗಡದ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಶೇ.25 ಅನುದಾನದಡಿ ನೀರಿನ ಟ್ಯಾಂಕ್ ಹಾಗೂ ಮನೆ ದುರಸ್ತಿಗೆ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

NO COMMENTS

error: Content is protected !!
Breaking