ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಮುಕ್ತ ಅವಕಾಶ
ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆ ಕಾರ್ಯಕ್ರಮ ಎ. ೫ರಂದು ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ವತಿಯಿಂದ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆಯಲಿದೆ ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಮರ್ಧೆ ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ 1 ರಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ರಾಷ್ಟ್ರ ದ್ವಜಸ್ತಂಬ -ಹೀಗಿದ್ದರೆ ಚಂದ, 5ರಿಂದ 7ನೇ ತರಗತಿವರೆಗಿನ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಉದ್ಯಾನವನ ಹೀಗಿದ್ದರೆ ಚಂದ, 8 ರಿಂದ 10 ನೇ ತರಗತಿ ವರೆಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ರಸ್ತೆ-ಹೀಗಿದ್ದರೆ ಚಂದ, ಸಾರ್ವಜನಿಕರಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಯುದ್ಧ ಸ್ಮಾರಕ -ಹೀಗಿದ್ದರೆ ಚಂದ ಎನ್ನುವ ವಿಚಾರಗಳನ್ನು ನೀಡಲಾಗಿದೆ.
ನೋಂದಣಿಗೆ ಎ. 2 ರಂದು ಕೊನೆ ದಿನಾಂಕವಾಗಿದ್ದು ಹೆಚ್ಚಿನ ಮಾಹಿತಿಗೆ 9448254396, 9449231665, 9480594101 ಸಂಪರ್ಕಿಸಬಹುದು.



ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದೆಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.