ಸುಳ್ಯ ಜಟ್ಟಿಪಳ್ಳ ನಿವಾಸಿ ಕೆ.ಕೆ. ಕೃಷ್ಣಪ್ಪ ಗೌಡರು ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕೆ.ಕೆ.ಕೃಷ್ಣಪ್ಪ ಗೌಡರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕ ಉಪಾಧ್ಯಕ್ಷರಾಗಿ ದುಡಿದಿದ್ದರು.



ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.