ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ ಅವರ ಅನುಮೋದನೆಯ ಮೇರೆಗೆ ವಿಶ್ವವಿದ್ಯಾಲಯದ ಕುಲ ಸಚಿವರಾದ ಶ್ರೀ. ಶಿವಪ್ರಸಾದ್ ಪಿ. ಆರ್. ರವರು ಮಾ. 27 ರಂದು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಿದರು.

14 ಜನ ಆಂತರಿಕ ಸದಸ್ಯರು ಹಾಗೂ ಎರಡು ಜನ ಬಾಹ್ಯ ಸದಸ್ಯರನ್ನೊಳಗೊಂಡ ಸಮಿತಿಯಾಗಿದ್ದು, ಡಾ. ಲೀಲಾಧರ ಡಿ. ವಿ., ಅವರು ಚೇರ್ ಮೆನ್ ಆಗಿ ಕರ್ತವ್ಯ ನಿರ್ವಹಿಸಲ್ಲಿದ್ದಾರೆ.



ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ರಿಜಿಸ್ಟರ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ. ಸಿ., ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಜೊತೆ ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ. ಸಿ., ಕೆ. ವಿ. ಹೇಮನಾಥ್ ಖಜಾಂಜಿ ಡಾ. ಗೌತಮ್ ಗೌಡ ಹಾಗೂ ಕೌನ್ಸಿಲ್ ಮೆಂಬರ್ಸ್ ಗಳಾದ ಶ್ರೀ ಜಗದೀಶ್ ಅಡ್ತಲೆ, ಶ್ರೀಮತಿ ಮೀನಾಕ್ಷಿ ಹೇಮನಾಥ್, ಶ್ರೀ ಧನಂಜಯ ಮದುವೆಗದ್ದೆ ಹಾಗೂ ಸಂಸ್ಥೆಯ ಬೋಧಕ ಬೋಧಕ್ಕೆ ತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.