ಕೆವಿಜಿ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ “ಭಾರತೀಯ ಸಾಕ್ಷ್ಯ ಅಧಿನಿಯಮ -2023 ” ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ವನ್ನು ಮಾರ್ಚ್ 27 ರಂದು ಹಮ್ಮಿಕೊಳ್ಳಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾoಶುಪಾ ಲರಾದ ಡಾ. ಉದಯಕೃಷ್ಣ ಬಿ ವಹಿಸಿದ್ದರು.ಸoಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರಿನ ಹಿರಿಯ ನ್ಯಾಯವಾದಿಗಳಾದ ಸುಧೀರ್ ತೋಲ್ಪಾಡಿಯವರು , “ಭಾರತೀಯ ಸಾಕ್ಷ್ಯ ಅಧಿನಿಯಮದಲ್ಲಿ ಸಾಬೀತು ಪಡಿಸಿರುವ, ಸಾಬೀತು ಪಡಿಸಲಾಗದ ವಿಷಯಗಳು, ತಪ್ಪೊಪ್ಪಿಗೆ, ನ್ಯಾಯಾoಗ ಸೂಚನೆಗಳ ಬಗ್ಗೆ ವಿವರಿಸಿದರು.



ಕಾರ್ಯಕ್ರಮದ ಗೌರವ ಅತಿಥಿಗಳಾದ ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾoಶುಪಾಲ, ಕಾನೂನು ಕಾಲೇಜಿನ ಆಡಳಿತಾಧಿಕಾರಿ ಪ್ರೊ. ದಾಮೋದರ ಗೌಡರು,” ನ್ಯಾಯಾಂಗ ಕಾರ್ಯಗಳು ಸುಸೂತ್ರವಾಗಿ ನಡೆಯಲು ಭಾರತೀಯ ಸಾಕ್ಷ್ಯ ಅಧಿನಿಯಮದ ಉಪಬಂಧಗಳು ಯಾವ ರೀತಿ ಸಹಾಯವಾಗುತ್ತದೆ ಎಂದು ವಿವರಿಸಿದರು. ಕಾರ್ಯಕ್ರಮದ ಸಂಯೋಜಕಿ, ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ ಟೀನಾ ಎಚ್ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು. ಕೀರ್ತನ ಸಿ ಸ್ವಾಗತಿಸಿ, ಕು ವೈಶಾಲಿ ದೇವರಾಜ್ ವಂದಿಸಿದರು. ಕು ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಭೋದಕ, ಭೋದಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.