ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಂತೆ ವಿ.ಹೆಚ್.ಪಿ ಬಜರಂಗದಳ ಆಗ್ರಹ

0

ಸುಳ್ಯದ ನಾವೂರು ಎಂಬಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಚಂದ್ರಿಕಾ ಎಂಬ ಮಹಿಳೆಗೆ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಎಂಬವರು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸುತೇವೆ. ಕೇಸು ದಾಖಲಿಸಿ 24 ಗಂಟೆ ಕಳೆದರೂ ಆರೋಪಿಯನ್ನು ಬಂಧಿಸದಿರುವುದನ್ನು ಖಂಡಿಸುತ್ತೇವೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಬೇಕು ಇಲ್ಲವಾದಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ತಿಳಿಸಿದೆ.