ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಮಾಹಿತಿ ಉಪನ್ಯಾಸ ಕಾರ್ಯಕ್ರಮ

0

ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಾನೂನು ಅರಿವು ಕಾರ್ಯಕ್ರಮವು ಮಾ.28 ರಂದು ನಡೆಯಿತು .ಈ ಕಾರ್ಯಕ್ರಮದಲ್ಲಿ ಸುಳ್ಯ ಪೊಲೀಸ್ ಠಾಣೆ ಹೆಡ್ ಕಾನ್ ಸ್ಟೇಬಲ್ ಆಗಿರುವ ಶ್ರೀಮತಿ ಸಂಧ್ಯಾಮಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಇವರು ಉಪಸ್ಥಿತಿ ಇದ್ದು,ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪ್ರಭಾವತಿ ಎಸ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.