ಸುಳ್ಯ ಎನ್.ಎಂ.ಸಿ.ಯಲ್ಲಿ ವಾರ್ಷಿಕ ಕ್ರೀಡಾಕೂಟ -2025

0

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಮಾ. 28 ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ವಹಿಸಿದ್ದರು.

ಮುಖ್ಯ ಅಥಿತಿಯಾಗಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ನಿರ್ದೇಶಕಿ ಡಾ ಮಮತ ಕೆ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೀತಾರಾಮ್ ಎಮ್.ಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರ ಜಗದೀಶ್, ಶಿಕ್ಷಕ ರಕ್ಷಕ ಘಟಕದ ಅಧ್ಯಕ್ಷೆ ಶಶ್ಮಿ ಭಟ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಬಳಿಕ ಕ್ರೀಡಾಕೂಟ ನಡೆಯಿತು.