
ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಮಂಗಳೂರು, ನೆಹರೂ ಯುವಕೇಂದ್ರ ಮಂಗಳೂರು ಮತ್ತು ದೀಪಾಂಜಲಿ ಮಹಿಳಾ ಮಂಡಲ ರಿ ಹಾಗೂ ದೀಪಾಂಜಲಿ ಭಜನಾ ಮಂಡಳಿ ರಿ. ಶಾಂತಿನಗರ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸುಳ್ಯದ ಶ್ರೀರಾಮ ಮಂದಿರದಲ್ಲಿ ಮಾ. ೨೪ರಂದು ನಡೆಯಿತು. ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸಂಚಾಲಕಿ ಉಮಾ ಮಾತಾಜಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ವಿಶ್ವ ಕ್ಷಯ ರೋಗ ದಿನಾಚರಣೆಯ ಬಗ್ಗೆ ಕೋಲಾರ ದೇವರಾಜ ಅರಸು ಮೆಡಿಕಲ್ ಕಾಲೇಜಿನ ನಿವೃತ್ತ ಮುಖ್ಯ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮಿ ನಾಯಕ್ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ವೇದಿಕೆಯಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲಲಿತಾ ಎಂ., ಕಾರ್ಯದರ್ಶಿ ಬಿಂದು ಚಂದ್ರನ್, ಭಜನಾ ಮಂಡಳಿ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ, ಕಾರ್ಯದರ್ಶಿ ಶ್ರೀಮತಿ ಕುಸುಮಾ ಮೋಂಟಡ್ಕ ಉಪಸ್ಥಿತರಿದ್ದರು.



ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀಮತಿ ಹೇಮಲತಾ ಗಣೇಶ್ ಕಜೆಗದ್ದೆ ಇವರು ಆಟೋಟ ಸ್ಪರ್ಧೆಗಳನ್ನು ನಡೆಸಿ, ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಮಾ ಮಾತಾಜಿಯವರನ್ನು ಗೌರವಿಸಲಾಯಿತು.