ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಯವರ ಮೇಲೆ ಸುಳ್ಳು ಆರೋಪ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಖಂಡನೆ

0


ಪಕ್ಷದ ಕ್ರಿಯಾಶೀಲ ನಾಯಕರಾದ ಕಂಠಿಯವರ ಮೇಲೆ ಮಹಿಳೆ ಮೇಲೆ ಹಲ್ಲೆ ಎಂಬ ಸುಳ್ಳು ಆರೋಪವನ್ನು ಹೊರಿಸಿ ದೂರು ಕೊಟ್ಟಿರುವುದು ಖಂಡನೀಯ .

ನಗರ ಪಂಚಾಯತ್ ಸದಸ್ಯನಾಗಿ ಸಮಾಜದ ಎಲ್ಲರ ಜೊತೆ ಬೆರೆತು ಅಬಿವೃದ್ದಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಇವರ ಮೇಲೆ ಈ ರೀತಿಯ ಸುಳ್ಳು ಆರೋಪ ಮಾಡಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಇದರ ಹಿಂದಿರುವ ಸತ್ಯಾ ಸತ್ಯತೆಯನ್ನು ಬಯಲಿಗೆಳೆಯಬೇಕಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯತ ಘಟಕದ ಅದ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿಯವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.