ಎ.1 ಮತ್ತು 2 : ಶ್ರೀ ಶಿರಾಡಿ ರಾಜನ್ ದೈವಸ್ಥಾನ ನೆಡಿಲು -ಕುತ್ಯಾಳದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

0


ಕನಕಮಜಲಿನ ನೆಡಿಲು -ಕುತ್ಯಾಳ ಎಂಬಲ್ಲಿ ನವೀಕೃತ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ರವೀಶ ತಂತ್ರಿಯವರ ನೇತೃತ್ವದಲ್ಲಿ ಎ. 1 ಮತ್ತು 2ರಂದು ನಡೆಯಲಿದೆ.


ಎ. 1ರಂದು ಸಂಜೆ ತಂತ್ರಿಯವರ ಆಗಮನದ ಬಳಿಕ ಭಜನಾ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಎ. 2ರಂದು ಬೆಳಿಗ್ಗೆ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆದ ಬಳಿಕ 9.24ರ ವೃಷಭ ಲಗ್ನದಲ್ಲಿ ಶ್ರೀ ಶಿರಾಡಿ ರಾಜನ್ ದೈವದ ಪೀಠ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಮಹಾಪೂಜೆ, ನಿತ್ಯ ನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ತುಳುವ ಬೊಳ್ಳಿ ದಯಾನಂದ ಕತ್ತಲ್‌ಸಾರ್‌ರವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ನಂತರ ಅನ್ನಸಂತರ್ಪಣೆ ನಡೆಯಲಿದೆ.