ಪೆರುವಾಜೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

0

ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ

ಪೆರುವಾಜೆ ಗ್ರಾಮ ಪಂಚಾಯತ್ ನ 2024- 25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಇವರ ಅಧ್ಯಕ್ಷತೆಯಲ್ಲಿ ಮಾ.29 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಪಿಡಿಒ ತಿರುಮಲೇಶ್ವರ್ ಸ್ವಾಗತಿಸಿ,ವರದಿ ಮಂಡಿಸಿದರು.
ಸುಳ್ಯದ ವಲಯಾರಣ್ಯಾಧಿಕಾರಿ ಸಂಜು ಡಿ.ಲಮಾಣಿ ನೋಡೆಲ್ ಅಧಿಕಾರಿಯಾಗಿದ್ದರು.


ಕುಡಿಯುವ ನೀರಿನ ಬಿಲ್ಲು,ಬೆಳ್ಳಾರೆ ಸರಕಾರಿ ಆಸ್ಪತ್ರೆಯಲ್ಲಿ ಸಂಜೆ,ರಾತ್ರಿ ವೇಳೆಯಲ್ಲಿ ವೈದ್ಯರ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆಗಳು ನಡೆದವು.
ಇಲಾಖಾಧಿಕಾರಿಗಳು ಇಲಾಖೆಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್ ಸದಸ್ಯರಾದ ಶ್ರೀಮತಿ ಚಂದ್ರಾವತಿ,ಶ್ರೀಮತಿ ಗುಲಾಬಿ,ಪದ್ಮನಾಭ ಶೆಟ್ಟಿ,ಸಚಿನ್ ರಾಜ್ ಶೆಟ್ಟಿ,ಶ್ರೀಮತಿ ರೇವತಿ,ಮಾಧವ ಮುಂಡಾಜೆ ಉಪಸ್ಥಿತರಿದ್ದರು.