ಅಧ್ಯಕ್ಷರಾಗಿ ಜಗದೀಶ್ ಹುದೇರಿ, ಕಾರ್ಯದರ್ಶಿಯಾಗಿ ರೋಹಿತ್ ಹೆದ್ದಾರಿ
ಸ.ಹಿ.ಪ್ರಾ ಶಾಲೆ ಮುರುಳ್ಯ ಶಾಂತಿನಗರದಲ್ಲಿ ಮಾ. 29ರಂದು ಹಿರಿಯ ವಿದ್ಯಾರ್ಥಿ ಸಂಘದ ಸಭೆ ನಡೆದು ಮುಂದಿನ ಅವಧಿಗೆ ಅಧ್ಯಕ್ಷರಾಗಿ ನ್ಯಾಯವಾದಿ ಜಗದೇಶ ಹುದೇರಿ ಮತ್ತು
ಪ್ರಧಾನ ಕಾರ್ಯದರ್ಶಿಯಾಗಿ ರೋಹಿತ್ ಹೆದ್ದಾರಿ ಅವಿರೋಧವಾಗಿ ಆಯ್ಕೆಯಾದರು. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂದೀಪ್ ಹುದೇರಿ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತನ ಶೆಟ್ಟಿ ಕಳತ್ತಜೆ ಮತ್ತು ಕೋಶಾಧಿಕಾರಿಯಾಗಿ ಮುಖ್ಯ ಶಿಕ್ಷಕಿ ಸೀತಾ ವಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿಗೆ 20 ಮಂದಿ ಹಿರಿಯ ವಿದ್ಯಾರ್ಥಿಗಳು ಸದಸ್ಯರಾಗಿ ಆಯ್ಕೆಮಾಡಲಾಯಿತು.



ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ನಡುಬೈಲು ಸಭೆಯ ಅಧ್ಯಕ್ಷ ಸ್ಥಾನ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ವಸಂತ ನಡುಬೈಲು, ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ಆಲಾಜೆ, ಗ್ರಾ.ಪಂ ಉಪಾಧ್ಯಕ್ಷೆ ಕು. ಜಾನಕಿ, ಸದಸ್ಯೆ ಶೀಲಾವತಿ ಗೋಳ್ತಿಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಶಾಲಿನಿ ಸುಭಾಶ್ ಸ್ವಾಗತಿಸಿ, ಹಿರಿಯ ಶಿಕ್ಷಕಿ ಉಷಾ ಹೇಮಳ ವಂದಿಸಿದರು.