ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಜಾನಪದ ಉತ್ಸವ 2025, ನಮ್ಮ ಸಂಸ್ಕೃತಿ ನಮ್ಮ ಉತ್ಸವ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಮಾ -27 ರಂದು ನಡೆಯಿತು.
ನೆಹರು ಮೆಮೊರಿಯಲ್ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ ಪೂವಪ್ಪ ಕಣಿಯೂರು ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ದಿನನಿತ್ಯದ ಜೀವನ ಕ್ರಮಕ್ಕೂ ಜಾನಪದ ಕ್ಕೂ ಅವಿನಾಭಾವ ಸಂಬಂಧ ಇದೆ. ಜಾನಪದವನ್ನು ಉಳಿಸಲು ನಾವೆಲ್ಲಾ ಶ್ರಮಪಡಬೇಕೆಂದು ಅವರು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.



ವೇದಿಕೆಯಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ ವಿಭಾಗದ ಸಂಚಾಲಕರಾದ ಡಾ ಪ್ರೀತಿ ಕೆ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯ ಶಂಕರ ಹೆಚ್, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪುಷ್ಪರಾಜ ಕೆ ಮೊದಲಾದವರು ಉಪಸ್ಥಿತರಿದ್ದರು. ಆಶಯ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಉಪನ್ಯಾಸಕ ಪುಷ್ಪರಾಜ್ ಸ್ವಾಗತಿಸಿದರು. ವಿದ್ಯಾರ್ಥಿ ಕೃಷ್ಣಪ್ರದೀಪ ಅತಿಥಿ ಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ದೀಕ್ಷಿತ ವಂದಿಸಿದರು. ವಿದ್ಯಾರ್ಥಿನಿ ಶ್ರುತಿ ಆರ್ ಎಲ್ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಗೆ ಹಾಳೆ ಎಳೆಯುವ ಜಾನಪದ ಕ್ರೀಡೆ ನಡೆಯಿತು.