ಡಾ ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ 2023-24 ನೇ ಶೈಕ್ಷಣಿಕ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ರ‌್ಯಾಂಕ್ ಗಳಿಸಿದ್ದು ಈ ಮೂಲಕ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿರುತ್ತಾರೆ.
ಸ್ನಾತಕ ಸಮಾಜಕಾರ್ಯ ಪದವಿ (BSW) ಪರೀಕ್ಷೆಯಲ್ಲಿ ಸುಳ್ಯದ ಆಲೆಟ್ಟಿ ಗ್ರಾಮದ ಕೊಲ್ಚಾರ್ ನರಂದಗುಳಿ ಮನೆ ಕುಂಞರಾಮ ಮತ್ತು ಪಾರ್ವತಿ ದಂಪತಿಗಳ ಸುಪುತ್ರಿ ಕು. ಕೃತಿಕಾ ಎನ್ ಅವರು ದ್ವಿತೀಯ ರ‌್ಯಾಂಕ್ ಪಡೆದಿರುತ್ತಾರೆ.
ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (M. Com.) ಪದವಿ ಪರೀಕ್ಷೆಯಲ್ಲಿ ಕು. ಚೈತ್ರ ಕೆ. ಇವರು ಎಂಟನೇ ರ‌್ಯಾಂಕ್ ಗಳಿಸಿದ್ದಾರೆ. ಇವರು ಬೆಳ್ಳಾರೆಯ ಕಾವಿನಮೂಲೆ ರಾಜಾರಾಮ್ ಕೆ ಮತ್ತು ಪ್ರವೀಣ ಸರಸ್ವತಿ ದಂಪತಿಗಳ ಸುಪುತ್ರಿಯಾಗಿದ್ದು, ಪ್ರಸ್ತುತ ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.



ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶವಾದ ಬೆಳ್ಳಾರೆಯ ಪೆರುವಾಜೆಯಲ್ಲಿರುವ ಸರ್ಕಾರಿ ಕಾಲೇಜಿನ ಈ ವಿದ್ಯಾರ್ಥಿನಿಯರ ಅಮೋಘ ಸಾಧನೆಯು ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆರುವಂತೆ ಮಾಡಿದ್ದು, ಅವರನ್ನು ಸಂಸ್ಥೆಯ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿ, ರಕ್ಷಕ- ಶಿಕ್ಷಕ ಸಂಘ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಅಭಿನಂದಿಸಿರುತ್ತಾರೆ.