ಸುಳ್ಯದಲ್ಲಿ ಅದ್ದೂರಿಯಿಂದ ನಡೆದ ಸುಳ್ಯ ಕಬಡಿ ಉತ್ಸವ 2025

0

ಕರ್ನಾಟಕ ರಾಜ್ಯ ಅಮೆಚೂರು ಕಬ್ಬಡಿ ಅಸೋಸಿಯೇಶನ್ , ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಅಂತರ್ ರಾಜ್ಯ ಮಟ್ಟದ ಎಂಟು ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ಪುರುಷರ ಪ್ರೊ ಮಾದರಿಯ ಕಬ್ಬಡಿ ಪಂದ್ಯಾಟ ಮಾ. 29ರಂದು ಸುಳ್ಯ ಶ್ರೀ ಚನ್ನಕೇಶವ ದೇವಸ್ಥಾನದ ಮೈದಾನದಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಬಡ್ಡಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಅಕ್ಷಯ್ ಕೆ ಸಿ ವಹಿಸಿದ್ದರು. ಸುಳ್ಯ ಕಬ್ಬಡಿ ಉತ್ಸವ 2025 ಇದರ ಅಧ್ಯಕ್ಷ ಡಾ. ಡಿ. ವಿ ಲೀಲಾಧರ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಕ್ರೀಡಾ ಸಾಧಕರನ್ನು ಹಾಗೂ ರಾಜೀವ್ ಗಾಂಧಿ ಆರೋಗ್ಯ
ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ
ಮಂಡಳಿಗೆ ಚೆಯರ್‌ಮನ್ ಆಗಿ ಆಯ್ಕೆಯಾದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರೂ, ಕಬಡ್ಡಿ ಉತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಡಾ. ಡಿ.ವಿ. ಲೀಲಾಧರ್ ರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ನಿರೀಕ್ಷಾ ಗುರುದತ್ ನಾಯಕ್ ಪ್ರಾರ್ಥಿಸಿದರು. ಶ್ರೀಮತಿ ಲತಾಶ್ರೀ ಮತ್ತು ತೀರ್ಥೇಶ್ ಯಾದವ್ ಕಾರ್ಯಕ್ರಮ ನಿರೂಪಿಸಿದರು.