ಪಠೇಲ್ ಚಾರಿಟೇಬಲ್ ಟ್ರಸ್ಟ್ ನಿಂದ ಕೆ.ಡಿ.ಪಿ. ಸದಸ್ಯ ಅಶ್ರಫ್ ಗುಂಡಿಯವರಿಗೆ ಸನ್ಮಾನ

0

ಪಠೇಲ್ ಚಾರಿಟೇಬಲ್ ಟ್ರಸ್ಟ್ ಅರಂತೋಡು ಇದರ ವತಿಯಿಂದ ನಡೆದ ಪಠೇಲ್ ರೆಸಿಡೆನ್ಸಿ ಉದ್ಘಾಟನೆ ಮತ್ತು ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿಯವರನ್ನು ಸನ್ಮಾನಿಸಲಾಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್ ಅಶ್ರಫ್ ಗುಂಡಿಯವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಸುಳ್ಯ ನಗರ ಪ್ರಾಧಿಕಾರ ಅಧ್ಯಕ್ಷ ಕೆ.ಎಂ ಮುಸ್ತಫ, ಪಠೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಬದುರುದ್ಧೀನ್ ಪಠೇಲ್, ಹಾಜಿ ಅಬ್ದುಲ್ ಖಾದರ್ ಪಠೇಲ್, ಸೈಫುದ್ದೀನ್ ಪಠೇಲ್ ಮೊದಲಾದವರು ಉಪಸ್ಥಿತರಿದ್ದರು.