ದುಗ್ಗಲಡ್ಕ ದುಗ್ಗಲಾಯ ದೈವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ದುಗ್ಗಲಡ್ಕ-ಕೊಡಿಯಾಲಬೈಲ್- ಸುಳ್ಯ ರಸ್ತೆಗೆ ಶಾಸಕರ ಅನುದಾನದಿಂದ 45 ಲಕ್ಷ ಮಂಜೂರಾಗಿದ್ದು, ಈ ಕಾಮಗಾರಿಗೆ ಗುದ್ದಲಿಪೂಜೆ ನೀರಬಿದಿರೆ ಎಂಬಲ್ಲಿ ನಡೆಯಿತು ಹಾಗೂ ನಗರ ಪಂಚಾಯತ್ ಅನುದಾನದಲ್ಲಿ ಕಾಂಕ್ರೀಟೀಕರಣಗೊಂಡ ದುಗ್ಗಲಾಯ ದೈವದ ಭಂಡಾರ ಹೋಗುವ ರಸ್ತೆಯ ಉದ್ಘಾಟನೆ ನಡೆಯಿತು.
ಎರಡೂ ಅಭಿವೃದ್ಧಿ ಕಾಮಗಾರಿಗಳನ್ನು ಮಾ.29 ರಂದು ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ಮತ್ತು ಉದ್ಘಾಟನೆ ನೆರವೇರಿಸಿದರು.




ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ.ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಕಿಶೋರಿ ಶೇಟ್,ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಮುಖ್ಯಾಧಿಕಾರಿ ಸುಧಾಕರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಕುಸುಮಾಧರ ಎ.ಟಿ, ದಿನೇಶ್ ಡಿ.ಕೆ., ಶ್ರೀಕಾಂತ್ ಮಾವಿನಕಟ್ಟೆ, ಶಿವಪ್ರಸಾದ್ ಕುದ್ಪಾಜೆ, ಶೇಖರ್ ಕುದ್ಪಾಜೆ ಮೊದಲಾದವರು ಉಪಸ್ಥಿತರಿದ್ದರು.