Home ಅಪಘಾತ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು

ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು

0

ಮನೆ ಮತ್ತು ಕಾರು ಜಖಂ – ಕಾರಿನಲ್ಲಿದ್ದ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅಪಾಯದಿಂದ ಪಾರು

ನಿಯಂತ್ರಣ ತಪ್ಪಿದ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂ ಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಯವರ ಸೊಸೆ ಇಂದು ಬೆಳಿಗ್ಗೆ ಅವರ ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್ ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್ ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಬಿತ್ತು. ಪರಿಣಾಮ ಕಾರು ಮತ್ತು ಮನೆ ಜಖಂಗೊಂಡಿತು.

ಅದೃಷ್ಟ ವಶಾತ್ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅಪಾಯದಿಂದ ಪಾರಾಗಿದ್ದಾರೆ. ಜನ ಸೇರಿ ಕಾರೊಳಗಿದ್ದ ಅವರು ಹೊರಬರಲು ಸಹಕರಿಸಿದರು. ಬಳಿಕ ಕ್ರೇನ್ ಮೂಲಕ ಕಾರನ್ನು ಮನೆಯ ಮೇಲ್ಛಾವಣಿಯಿಂದ ಕೆಳಗಿಳಿಸಲಾಯಿತೆಂದು ತಿಳಿದು ಬಂದಿದೆ.

NO COMMENTS

error: Content is protected !!
Breaking