ಬಂಟರ ಯಾನೆ ನಾಡವರ ಸಂಘ ಮಹಿಳಾ ಘಟಕ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ

0

ಬಂಟರ ಯಾನೆ ನಾಡವರ ಸಂಘ ಮಹಿಳಾ ಘಟಕ ಹಾಗೂ ಲಯನ್ಸ್ ಕ್ಲಬ್ ಸುಳ್ಯ ಇದರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಮಾ. 3೦ ರಂದು ಬಂಟರ ಭವನ ಕೇರ್ಪಳದಲ್ಲಿ ನಡೆಯಿತು.

ವೇದಿಕೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಇಂದಿರಾ ರೈ, ಸುಳ್ಯ ಪೊಲೀಸ್ ಠಾಣೆಯ ಕ್ರೈಮ್ ಇನ್ಸ್ಪೆಕ್ಟರ್ ಶ್ರೀಮತಿ ಸರಸ್ವತಿ, ಲಯನ್ಸ್ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರಾಮಕೃಷ್ಣ ರೈ , ಸುಳ್ಯ ಗಾರ್ಡನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಾಯಿಗೀತಾ ಜ್ಞಾನೇಶ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಶೆಟ್ಟಿ , ರಾಮಚಂದ್ರ ಪಲ್ಲತ್ತಡ್ಕ ಉಪಸ್ಥಿತರಿದ್ದರು. ಮೀರಾ ರೈ ಪ್ರಾರ್ಥನೆ ಮಾಡಿದರು. ಇಂದಿರಾ ರೈ ಸ್ವಾಗತಿಸಿ ಅಧ್ಯಕ್ಷೀಯ ನೆಲೆಯಲ್ಲಿ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.
ಡಾ. ಸಾಯಿಗೀತಾ ಜ್ಞಾನೇಶ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶುಭ ಹಾರೈಸಿದರು. ಡಾ. ಸಾಯಿಗೀತಾ ಜ್ಞಾನೇಶ್ ಹಾಗೂ ಶ್ರೀಮತಿ ಸರಸ್ವತಿ ಕ್ರೈಮ್ ಇನ್ಸ್ಪೆಕ್ಟರ್ ಸುಳ್ಯ ಇವರನ್ನು ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿದ ಶ್ರೀಮತಿ ಸರಸ್ವತಿ ಕ್ರೈಮ್ ಇನ್ಸ್ಪೆಕ್ಟರ್ ಸುಳ್ಯ ಕಾರ್ಯಕ್ರಮದ ಬಗ್ಗೆ ಮಾತನಾಡಿ ಪ್ರತಿಯೊಬ್ಬ ಪೋಷಕರು ಮಕ್ಕಳ ಬಗ್ಗೆ ಹೇಗೆ ಗಮನಹರಿಸಬೇಕು ಎಂಬುದರ ಬಗ್ಗೆ ತಿಳಿಸಿದರು.
ಲ. ರಾಮಕೃಷ್ಣ ರೈ , ಕಮಲಾಕ್ಷಿ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನಂತರ ಮಹಿಳೆಯರಿಗಾಗಿ ಆಟಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. ರಾಮಚಂದ್ರ ಪಲ್ಲತ್ತಡ್ಕ ಇವರು ವಂದನಾರ್ಪಣೆ ಮಾಡಿದರು. ಗೀತಾ ಶೆಟ್ಟಿ ಮತ್ತು ವಸಂತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.