ಬೆಳ್ಳಾರೆ ಪೊಲೀಸ್ ಠಾಣೆಗೆ ಇಬ್ಬರು ಪೊಲೀಸರು ಆಗಮಿಸಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ರಾಜ್ಯ ಗುಪ್ತವಾರ್ತೆ ಮಂಗಳೂರು ವಿಭಾಗದಲ್ಲಿ ಹಿರಿಯ ಗುಪ್ತಚರ ಅಧಿಕಾರಿಯಾಗಿದ್ದ ಶ್ರೀಧರ ಬಿ.ಯವರು ಮಾ.23 ರಂದು ಬೆಳ್ಳಾರೆ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ ಟೇಬಲ್ ಆಗಿ ವರ್ಗಾವಣೆಗೊಂಡು ಬಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.



ಇವರು ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದವರು.
ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿದ್ದ ಅರ್ಪಿತರವರು ಮಾ.29 ರಂದು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಇವರು ಬಳ್ಳಾರಿಯ ವಿಜಯನಗರದವರು.