ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಡೆದ ದುರ್ಘಟನೆ
ಭಾಗವತ ಸತೀಶ್ ಆಚಾರ್ಯರವರು ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸಂಭವಿಸಿದೆ.



ಸತೀಶ್ ಆಚಾರ್ಯರವರು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮುಂಜಾನೆ ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಹಿಂತಿರುಗುತ್ತಿದ್ದರು. ಈ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಗೆ ತಲುಪುತ್ತಿದ್ದ ಹಾಗೆ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆಯಿತು. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸತೀಶ್ ಆಚಾರ್ಯರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.