ಸುಳ್ಯ ಅಪಘಾತ ಪ್ರಕರಣ : ಆರೋಪಿ ಖುಲಾಸೆ

0

ಸುಳ್ಯದಲ್ಲಿ ನಡೆದ ಅಪಘಾತ ಪ್ರಕರಣವೊಂದರ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಎಂಬ ಕಾರಣಕ್ಕೆ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದಾಗಿ ತಿಳಿದು ಬಂದಿದೆ.
೨೦೨೪ ಎಪ್ರಿಲ್ ೧೭ರಂದು ಬೆಳಗ್ಗಿನ ಜಾವ ೫ ಗಂಟೆ ಸುಮಾರಿಗೆ ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರು ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಕಡೆಯಿಂದ ಸಿ.ಎ. ಬ್ಯಾಂಕ್ ಕಡೆಗೆ ಗೋಪಾಲ ಜಟ್ಟಿಪಳ್ಳ ಎಂಬವರು ರಸ್ತೆ ದಾಟುತ್ತಿದ್ದಾಗ ಗಾಂಧಿನಗರ ಕಡೆಯಿಂದ ಇನೋವಾ ಕಾರನ್ನು ಚಲಾಯಿಸಿಕೊಂಡು ಬಂದ ಆದಮ್ ಅಜ್‌ಮಲ್ ಕಾಸರಗೋಡು ಎಂಬವರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಗೋಪಾಲ ಎಂಬವರಿಗೆ ಢಿಕ್ಕಿ ಪಡಿಸಿದರು. ಪರಿಣಾಮ ಗೋಪಾಲ ಎಂಬವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಈ ಬಗ್ಗೆ ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ಸುಳ್ಯ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಪ್ರಕರಣ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳ ಕೊರತೆಯಾಗಿದೆ ಎಂಬ ಕಾರಣ ನೀಡಿದ ನ್ಯಾಯಾಲಯ ಆರೋಪಿಯನ್ನು ೨೦೨೫ ಮಾ.೨೨ರಂದು ಖುಲಾಸೆ ಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿಯ ಪರವಾಗಿ ವಕೀಲರಾದ ವಿನಯ್ ಎಸ್.ಕೆ. ಸೋಣಂಗೇರಿ ಇವರು ವಾದಿಸಿದ್ದಾರೆ.