Home Uncategorized ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳರಿಗೆ ಬೀಳ್ಕೊಡುಗೆ

ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳರಿಗೆ ಬೀಳ್ಕೊಡುಗೆ

0

ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಮಾ. 31ರಂದು ನಿವೃತ್ತರಾದ ಡಾ. ನಂದಕುಮಾರ್ ಬಾಳಿಕಳರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಮಾ. 31ರಂದು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುಬ್ರಹ್ಮಣ್ಯ ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ತ್ರಿಮೂರ್ತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸುಳ್ಯ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಕರುಣಾಕರ್, ಪಂಜ ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಬೆಳ್ಳಾರೆ ಪ್ರಾ.ಆ. ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಶ್ರೀರಂಗಪಟ್ಟಣ ಪ್ರಾ.ಆ.ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿರುವ ಡಾ. ಗಿರೀಶ್, ಅರಂತೋಡು ಪ್ರಾ.ಆ.ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ರವಿಚಂದ್ರ ದೇವರಗುಂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಡಾ. ಕಿರಣ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ದ್ವಿತೀಯ ದರ್ಜೆ ಸಹಾಯಕ ಮೋಹಿತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೀನಾ, ಲೆಕ್ಕ ಸಹಾಯಕ ರಾಜಶೇಖರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕೆ.ಸಿ. ಬೇಬಿ, ಸಮುದಾಯ ಆರೋಗ್ಯ ಅಧಿಕಾರಿ ಶಿಲ್ಪಾ, ನಿವೃತ್ತ ಹಿರಿಯ ಪ್ರಾಥಮಿಕ ಸುರಕ್ಷಾ ಧಿಕಾರಿಗಳಾದ ಹಿಮಲೇಶ್ವರಿ ಮತ್ತು ಪದ್ಮವೇಣಿ, ನಿವೃತ್ತ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಿ.ಸಿ. ಬೇಬಿ, ಡಾ. ಪದ್ಮ, ಶುಹಾಲ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ, ಕರ್ನಾಟಕ ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕಿನ ಅಧ್ಯಕ್ಷ ಡಾ. ನಿತಿನ್ ಪ್ರಭು ಡಾ. ನಂದಕುಮಾರ್ ರಿಗೆ ಶುಭ ಹಾರೈಸಿದರು. ನೇತ್ರ ಸಹಾಯಕ ರೋಹಿತ್ ಸನ್ಮಾನ ಪತ್ರ ವಾಚಿಸಿದರು. ಅರಂತೋಡು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಾಲಿನಿ ಪ್ರಾರ್ಥಿಸಿದರು. ಹಿರಿಯ ಕ್ಷಯರೋಗ ನಿಯಂತ್ರಣ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇವತಿ ವಂದಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಹಾಗೂ ವಿವಿಧ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಆಭಿಮಾನಿಗಳು ವೇದಿಕೆಗೆ ಬಂದು ಗೌರವಿಸಿದರು. ಡಾ. ನಂದಕುಮಾರರ ತಾಯಿ ಶ್ರೀಮತಿ ಯಶೋಧ ರಾಘವ ಬಾಳಿಕಳ, ಪತ್ನಿ ಶ್ರೀಮತಿ ಮಂಜುಳಾ ಎಸ್. ಕುಮಾರ್, ಪುತ್ರಿ ಆತ್ಮಿಕಾ ಬಿ.ಎನ್ ಸೇರಿದಂತೆ ಕುಟುಂಬಸ್ಥರು, ಬಂಧು‌, ಮಿತ್ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ. ನಂದಕುಮಾರರು ನಡೆದು ಬಂದ ದಾರಿ ಸಾಕ್ಷಚಿತ್ರ ಪ್ರದರ್ಶನ ನಡೆಯಿತು. ಕಾರ್ಯಕ್ರಮದ ಬಳಿಕ ಭೋಜನ ನಡೆಯಿತು.

NO COMMENTS

error: Content is protected !!
Breaking