
ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಜಾಲ್ಸುರು ಇಲ್ಲಿ ಐದು ದಿನದ ಬೇಸಿಗೆ ಶಿಬಿರದ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಎ. 1 ರಂದು ಉದ್ಘಾಟನೆಗೊಂಡಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾ ಗಿ ರಂಗಮಯೂರಿ ಕಲಾ ಶಾಲೆಯ ಸಂಚಾಲಕ ಲೋಕೇಶ್ ಉರುಬೈಲು ಇವರು ದೀಪ ಬೆಳಗಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ನ. ಸೀತಾರಾಮ ವಹಿಸಿ ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಚಾಲಕ ಗೋಪಾಲಕೃಷ್ಣ ಕಾಟೂರು, ಆಡಳಿತ ಮಂಡಳಿಯ ಕೋಶಾಧಿಕಾರಿ ಸುಧಾಕರ್ ಕಾಮತ್, ಆಡಳಿತ ಅಧಿಕಾರಿಎನ್ ಗೋಪಾಲ್ ರಾವ್, ಆಡಳಿತ ಮಂಡಳಿಯ ಸದಸ್ಯ ಶ್ರೀಮತಿ ಲತಾ ಮಧುಸೂದನ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರ ಅಡ್ಕಾರ್, ನವೀನ್ ಅಡ್ಕಾರ್, ಶ್ರೀಮತಿ ಚಂದ್ರಕಲಾ, ಶ್ರೀಮತಿ ಸಾವಿತ್ರಿರಾಮ್ ಕಣೆಮರಡ್ಕ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ಕ್ರಾಫ್ಟ್ , ಶಿಶು ಗೀತೆ, ಅಭಿನಯ ಗೀತೆ ಶಿಬಿರದಲ್ಲಿ ಮೂಡಿ ಬರಲಿದ
ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜರವರು ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಉಷಾ ಕಾರ್ಯಕ್ರಮ ನಿರೂಪಿಸಿದರು.