ಪಾಂಡಿಗದ್ದೆ ಶಾಲೆಯಲ್ಲಿ ಬೇಸಿಗೆ ಶಿಬಿರ -ಚಿಣ್ಣರ ಕಲರವ ಉದ್ಘಾಟನೆ

0

ಜೇಸಿಐ ಪಂಜ ಪಂಚಶ್ರೀ ಪ್ರಾಂತ್ಯ ಎಫ್ ವಲಯ 15 ಜೇಸಿ ಐ ಪಂಜ ಪಂಚಶ್ರೀ ಪ್ರಾಂತ್ಯ ‘ಎಫ್’ ವಲಯ 15 ಆಶ್ರಯದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಬೇಸಿಗೆ ಶಿಬಿರ 2025 ‘ಚಿಣ್ಣರ ಕಲರವ’ ಉದ್ಘಾಟನಾ ಕಾರ್ಯಕ್ರಮವು ಎ
1ರಂದು ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಪಾಂಡಿಗದ್ದೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ HGF ವಾಚಣ್ಣ ಕೆರೆಮೂಲೆ ವಹಿಸಿದ್ದರು. ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ, ದಾನಿಗಳಾದ ಜಯರಾಮ ಕಂಬಳ . ಉದ್ಘಾಟಿಸಿದರು.ವೇದಿಕೆಯಲ್ಲಿ ವಲಯ 15 ಭಾರತೀಯ ಜೇಸಿಸ್ ನ Zone Coordinator Membership Portal Update Zone 15 JCI INDIA JFD ವಿನೀತ್ ಶಗ್ರಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳಾಗಿ ಎಸ್ ಡಿ ಎಂ ಸಿ ಅಧ್ಯಕ್ಷ ದಯಾನಂದ ಕಂಬಳ, ಮುಖ್ಯ ಶಿಕ್ಷಕ ಯಶೋಧರ ಕಳಂಜ , ಚೆಸ್ ಆಟಗಾರರು ಮತ್ತು ತೀರ್ಪುಗಾರರು.ಯ,ತರಬೇತುದಾರ ಮಹೇಶ್ ಕೋಟೆ, ಜೇಸಿಐ ಪಂಜ ಪಂಚಶ್ರೀ ಕಾರ್ಯದರ್ಶಿ HGF ಅಶ್ವಥ್ ಬಾಬ್ಲುಬೆಟ್ಟು ,ಕಾರ್ಯಕ್ರಮ ನಿರ್ದೇಶಕರಾದ ಜೇಸಿ ಅಶೋಕ್ ಕುಮಾರ್ ದಿಡುಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೇಸಿ ಗಗನ್ ಕಿನ್ನಿಕುಮೇರಿ ವೇದಿಕೆಗೆ ಆಹ್ವಾನಿಸಿದರು. ಜೇಸಿ ವಾಣಿಯನ್ನು ಜೇಸಿ ಕಿರಣ್ ಕಂರ್ಬುನೆಕ್ಕಿಲ ವಾಚಿಸಿದರು.ಕಾರ್ಯದರ್ಶಿ ಜೇಸಿ ಅಶ್ವಥ್ ಬಾಬ್ಲುಬೆಟ್ಟು ವಂದಿಸಿದರು. ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು ಪೋಷಕರು , ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.