ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಮೆಮೋರಿಯಲ್ ಕಾಲೇಜು ಘಟಕ ಸುಳ್ಯ ಇದರ ವತಿಯಿಂದ ಆಯೋಜಿಸಿದ್ದ ಸುಳ್ಯ ಮತ್ತು ಕಡಬ ವಲಯ ಅಂತರ್ ಕಾಲೇಜು ಎನ್.ಎಸ್.ಎಸ್ ಸ್ಪರ್ಧಾ ಕಾರ್ಯಕ್ರಮ ಎ. 1ರಂದು ನಡೆಯಿತು.
ಕನ್ನಡ ವಿಭಾಗ ಮುಖ್ಯಸ್ಥರಾದ ಪ್ರೊ. ಸಂಜೀವ ಕುದ್ಪಾಜೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಕುರಿತು ಮಾತನಾಡಿದರು.
ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತ ಕೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ವಲಯ ಸಂಯೋಜಕರು ಮತ್ತು ಶ್ರೀ ರಾಮಕೃಷ್ಣ, ವಲಯ ಸಹ ಸಂಯೋಜಕರಾದ ಶ್ರೀಮತಿ ಆರತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿಗಳಾದ ಚಿತ್ರಲೇಖ ಕೆ. ಎಸ್ ಸ್ವಾಗತಿಸಿ, ಹರಿಪ್ರಸಾದ್ ಅತ್ಯಾಡಿಯವರು ವಂದಿಸಿದರು. ಎನ್.ಎಸ್ .ಎಸ್ ಸ್ವಯಂಸೇವಕ ಅಕ್ಷತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಂತರ ಎನ್.ಎಸ್.ಎಸ್ ಸ್ವಯಂ ಸೇವಕರುಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.