ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕುಮಾರಿ ರಶ್ಮಿರವರು ಇತಿಹಾಸ ವಿಭಾಗದಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯಕ್ಕೆ 3ನೇ ರ‍್ಯಾಂಕ್ ಪಡೆದಿದ್ದಾರೆ.
ಇವರು ಕಲ್ಲುಗುಂಡಿ ದಂಡೆಕಜೆಯ ನೆಕ್ಕಿಲ ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ನಳಿನಿ ದಂಪತಿಗಳ ದ್ವಿತೀಯ ಪುತ್ರಿಯಾಗಿದ್ದು, 1ನೇ ತರಗತಿಯಿಂದ 7ನೇ ತರಗತಿಯವರೆಗೆ ಕಲ್ಲುಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದು, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 8ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದಿರುತ್ತಾರೆ.
ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಪದವಿ ಪಡೆದು, ಮಂಗಳೂರಿನಲ್ಲಿ ಬಿಎಡ್ ಪದವಿ ಪಡೆದ ಇವರು ಪ್ರಸ್ತುತ ಹಾಸನದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.