ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

0

ಕೆವಿ ಜಿ ಕಾನೂನು ಕಾಲೇಜಿನಲ್ಲಿ ಉಪನ್ಯಾಸ ಮಾಲಿಕೆಯ ಅಂಗವಾಗಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆಯ ಕೋಶದ ಅಡಿಯಲ್ಲಿ ” ಭಾರತದ ಕಾರ್ಮಿಕ ಶಾಸನದ ಅಡಿಯಲ್ಲಿ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಅದರ ಪ್ರಸ್ತುತತೆ ” ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಎ.4 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಉದಯಕೃಷ್ಣ ಬಿ. ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ . ರೇಖಾ ಕೆ “ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯತೆ, ಮಹತ್ವ ಮತ್ತು ಪ್ರಸ್ತುತತೆ ” ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದ ಸಂಯೋಜಕಿ ಉಪನ್ಯಾಸಕಿ ಶ್ರೀಮತಿ ಶರ್ಮಿಳಾ ಬಿ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕು.ಕೀರ್ತನ ಬೇಬಿ ಸ್ವಾಗತಿಸಿ, ಸುಮನ್ ಕುಮಾರ್ ಟಿ.ಎಸ್. ವಂದಿಸಿದರು. ಕು.ಕೃಷ್ಣವೇಣಿ ಇ.ವಿ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಭೋದಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.