ಸುಳ್ಯ ತಾಲೂಕಿನ ಕನಕಮಜಲು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗಳಲ್ಲಿ ತೆರವಾದ ಸ್ಥಾನಗಳಿಗೆ ಮೇ.11ರಂದು ಚುನಾವಣೆ ನಡೆಯಲಿದೆ.
ಈ ಕುರಿತು ಜಿಲ್ಲಾಧಿಕಾರಿಗಳು ಎ.22ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಎ.28 ಕೊನೆಯ ದಿನವಾಗಿದೆ. ಎ.29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮೇ.2 ಕಡೆಯ ದಿನವಾಗಿದೆ. ಮೇ.11ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಢಯಲಿದೆ. ಮೇ.14ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯುವುದು.
ಸುಬ್ರಹ್ಮಣ್ಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಶ್ರೀಮತಿ ಭಾರತಿಯವರು ಗ್ರಾ.ಪಂ. ಸಾಮಾನ್ಯ ಸಭೆಗಳಿಗೆ ನಿರಂತರ ಹಾಜರಾಗದೇ ಇದ್ದುದರಿಂದ ಅವರ ಸದಸ್ಯ ಸ್ಥಾನ ರದ್ದಾಗಿತ್ತು.
ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ರವಿಚಂದ್ರ ಕಾಪಿಲರವರು ಅನಾರೋಗ್ಯದಿಂದ ನಿಧನರಾದ ಬಳಿಕ ಸದಸ್ಯ ಸ್ಥಾನ ತೆರವಾಗಿದೆ.