Home Uncategorized ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಿಗದಿಯಾಗಿದ್ದ ಕಣ್ಣಿನ ಶಸ್ತ್ರಚಿಕಿತ್ಸೆಯ ಯಂತ್ರ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಿಗದಿಯಾಗಿದ್ದ ಕಣ್ಣಿನ ಶಸ್ತ್ರಚಿಕಿತ್ಸೆಯ ಯಂತ್ರ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

0

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಇಂದು ನಡೆಯಬೇಕಾದ ಕಣ್ಣಿನ ಶಸ್ತ್ರಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಗಿದೆ.

ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಯಂತ್ರ ಉದ್ಘಾಟನೆಗೆ ಎ.5ರಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಆಮಂತ್ರಣದಲ್ಲಿ ಶಿಷ್ಟಾಚಾರ ಪಾಲನೆ ಆಗಿಲ್ಲ ಎಂದು ಸುಳ್ಯದ ಕಾಂಗ್ರೆಸ್ ನಾಯಕರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರಿಕೊಂಡಿದ್ದರು.

ಈ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲೂಕು ಆರೋಗ್ಯಾಧಿಕಾರಿ ಡಾ. ಕರುಣಾಕರರಿಗೆ ಕಾರಣ ಕೇಳಿ ನೋಟಿಸು ಮಾಡಿದ್ದರು.

ಇಂದು ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕರುಣಾಕರರು ತಿಳಿಸಿದ್ದಾರೆ.

NO COMMENTS

error: Content is protected !!
Breaking