ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಐದು ದಿನಗಳ ಕಾಲ ನಡೆದ ಬೇಸಿಗೆ ಶಿಬಿರ ಎ. 5 ರಂದು ಸಮಾರೋಪಗೊಂಡಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನ. ಸೀತಾರಾಮ ಅಧ್ಯಕ್ಷತೆ ವಹಿಸಿದ್ದರು. ಪುತ್ತುರಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲಾ ಶಿಕ್ಷಕ ಚಂದ್ರಶೇಖರ ಸುಳ್ಯಪದವು
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಶಾಲಾ ಸಂಚಾಲಕ ಡಾ.ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸುಧಾಕರ ಕಾಮತ್,
ಪ್ರೌಢ ಶಾಲಾ ಮುಖ್ಯ ಶಿಕ್ಷಕ ಗಿರೀಶ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಯಪ್ರಸಾದ್ ಕಾರಿಂಜ, ಶಿಬಿರದ ಕಾರ್ಯವಾಹ ಶ್ರೀಮತಿ ವಿದ್ಯಾಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಲಹರಿ, ಸಾತ್ವಿ, ಆಶಯ್ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ಶಿಕ್ಷಕಿಯರಾದ ಪೂರ್ಣಿಮಾ, ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.