Home Uncategorized ಎ.22: ಸುಳ್ಯದಲ್ಲಿ ತಾಲೂಕು ಮಟ್ಟದ ಮಕ್ಕಳ ಚೆಸ್ ಸ್ಪರ್ಧೆ

ಎ.22: ಸುಳ್ಯದಲ್ಲಿ ತಾಲೂಕು ಮಟ್ಟದ ಮಕ್ಕಳ ಚೆಸ್ ಸ್ಪರ್ಧೆ

0

ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು, ಇದೀಗ ಸುಳ್ಯ ತಾಲೂಕಿನಲ್ಲೆ ಪ್ರಪ್ರಥಮ ಬಾರಿಗೆ ಮಕ್ಕಳಿಗಾಗಿ ಮುಕ್ತ ತಾಲೂಕು ಮಟ್ಟದ ಚೆಸ್ ಸ್ಪರ್ಧೆ ಎ.22 ರಂದು ಸುಳ್ಯ ಕೊಡಿಯಾಲಬೈಲ್ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಗೌಡ ಸಂಘ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕ್ಕಲ್ಲು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿ ತಿಳಿಸಿದರು.

ಒಂದನೇ ತರಗತಿಯಿಂದ ಹತ್ತನೆಯ ತರಗತಿ ವರೆಗಿನ ಶಾಲಾ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದಾರೆ.ಒಂದನೆಯ ತರಗತಿಯಿಂದ ಐದನೇ ತರಗತಿ ಮಕ್ಕಳಿಗೆ ಕಿರಿಯ ಪ್ರಾಥಮಿಕ ವಿಭಾಗ ಆರನೇ ತರಗತಿಯಿಂದ 8ನೇ ತರಗತಿ ಯವರೆಗಿನ ಹಿರಿಯ ಪ್ರಾಥಮಿಕ ವಿಭಾಗ ಹಾಗೂ ಒಂಭತ್ತನೆಯ ಮತ್ತು ಹತ್ತನೆಯ ತರಗತಿ ಮಕ್ಕಳಿಗೆ ಪ್ರೌಢಶಾಲಾ ವಿಭಾಗದಲ್ಲಿ ಚೆಸ್ ಪಂದ್ಯಾಟ ನಡೆಯಲಿದೆ.ಹೆಣ್ಣು ಮತ್ತು ಗಂಡು ಮಕ್ಕಳ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ.

ಚೆಸ್ ಪಂದ್ಯಾಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಎ.20 ರೊಳಗೆ ಹೆಸರು ನೊಂದಾಯಿಸಿ ಕೊಳ್ಳಬೇಕು ಅಲ್ಲದೇ ಚೆಸ್ ಆಟ ಆಡುವ ವಿದ್ಯಾರ್ಥಿಗಳು ಚೆಸ್ ಬೋರ್ಡ್ ಅವರೇ ತರಬೇಕೆಂದು ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.

ಗೋಷ್ಠಿಯಲ್ಲಿ ಗೌಡ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸವಿತಾ ಸಂದೇಶ್,ಕೋಶಾಧಿಕಾರಿ ಜಯಶ್ರೀ ರಾಮಚಂದ್ರ ಪಲ್ಲತ್ತಡ್ಕ,ಉಪಾಧ್ಯಕ್ಷೆ ಮೀನಾಕ್ಷಿ ಆರ್, ಸಂಘಟಕರಾದ ಭಾರತಿ ಉಳುವಾರು,ಪುಷ್ಪಾಲತ ದೇವರಗುಂಡ,ಕುಸುಮಾವತಿ,ಜನಾರ್ದನ,ಸುಪ್ರಿತ್ ಮೊಂಟಡ್ಕ ಉಪಸ್ಥಿತರಿದ್ದರು.

NO COMMENTS

error: Content is protected !!
Breaking